Posts Slider

ಊಟಿ ಬಳಿ ಹೆಲಿಕಾಪ್ಟರ್ ದುರಂತ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 7 ಜನರ ದುರ್ಮರಣ..

1 min read
Spread the love

ಚೆನ್ನೈ: ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ.

ತಮಿಳುನಾಡಿನ ಊಟಿ ಬಳಿಯ ಕುನೂರ್ ಬಳಿ ಈ ದುರಂತ ಸಂಭವಿಸಿದೆ. ಸೇನಾ ಹೆಲಿಕಾಪ್ಟರ್ ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಕುಟುಂಬದವರು ಸೇರಿದಂತೆ 9 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಈಗಾಗಲೇ ಮೂವರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್ ನಲ್ಲಿ ರಕ್ಷಣಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಇದ್ದರು ಎಂಬ ಮಾಹಿತಿ ಇದೆ. ಆದರೆ ಈ ಬಗ್ಗೆ ಸೇನಾ ಮೂಲಗಳಿಂದಾಗಲಿ ಅಥವಾ ಕೇಂದ್ರ ಸರ್ಕಾರದಿಂದಾಗಲಿ ಅಧಿಕೃತವಾಗಿ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.


Spread the love

Leave a Reply

Your email address will not be published. Required fields are marked *