ಅಪಘಾತವೆರಡು 3 ಸಾವು- 23 ಜನರಿಗೆ ಗಾಯ- ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
1 min read
ಚಾಮರಾಜನಗರ: ಟಿಟಿ ವಾಹನವೊಂದು ನಿಯಂತ್ರಣ ತಪ್ಪಿ ಮೂವರು ಸಾವಿಗೀಡಾಗಿ ಹನ್ನೊಂದು ಜನರು ತೀವ್ರವಾಗಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಸುವರ್ಣವತಿ ಡ್ಯಾಮ್ ಬಳಿ ಸಂಭವಿಸಿದೆ.
ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಘಟನೆ ಸಂಭವಿಸಿದೆ. ಅಪಘಾತದಲ್ಲಿ 11 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸುವರ್ಣವತಿ ಡ್ಯಾಮ್ ಬಳಿ ವೇಗವಾಗಿ ಸಂಚರಿಸುತ್ತಿದ್ದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸ ಲಾಗಿದೆ.
ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆಯಿಂದ ಕೆಳಗಿಳಿದು 12 ಜನರಿಗೆ ಗಾಯಗಳಾದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ತೋರಣವಾಡಿ ಬಳಿ ಸಂಭವಿಸಿದೆ.
ಔರಾದ್ ದಿಂದ ತೋರಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ಸ್ ಸಡನ್ನಾಗಿ ನಿಯಂತ್ರಣ ತಪ್ಪಿ ಹೊಲದೊಳಗೆ ಹೋಗಿದೆ. ಹೀಗಾಗಿ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಕಮಲನಗರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.