ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಕಚೇರಿ ಬಳಿಯೇ ಅಪಘಾತ
1 min read
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಕಚೇರಿ ಎದುರೇ ಲಾರಿಗೆ ಟೆಂಪೋವೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಟೆಂಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ವಾಹನಗಳು, ಓವರ್ ಟೇಕ್ ಮಾಡುವಾಗ ಟೆಂಪೋ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಪ್ರಶಾಂತ ತಕ್ಷಣವೇ ಹೊರಗೆ ಜಿಗಿದ್ದಿದ್ದು, ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಟೆಂಪೊದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಪ್ರಶಾಂತ ಎಂಬುವವನ್ನ ಕಿಮ್ಸಗೆ ರವಾನೆ ಮಾಡಲಾಗಿದೆ. ಪ್ರಕರಣದ ಕುರಿತು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಎರಡು ವಾಹನಗಳನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಹುಬ್ಬಳ್ಳಿ ಐಟಿಸಿ ಗೋಡೌನ ಬಳಿ ಬೈಕುಗಳ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ
ಹುಬ್ಬಳ್ಳಿ: ನಗರದ ಹೊರವಲಯದ ಗದಗ ರಸ್ತೆಯಲ್ಲಿರುವ ITC ಗೋಡೌನ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾವಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಆತನನ್ನ ಹುಬ್ಬಳ್ಳಿ ಕಿಮ್ಸಗೆ ರವಾನೆ ಮಾಡಲಾಗಿದೆ. ಐಟಿಸಿ ಗೋಡೌನ್ ಬಳಿಯಿರುವ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರೀತಮ್ ಎಂಬ ಯುವಕ ರಾತ್ರಿಯ ಊಟವನ್ನು ತರಲು ಬಂದಾಗ ಘಟನೆ ನಡೆದಿದೆ. ಕೂಡಲೇ ಪ್ರೀತಮ್ ನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರೀತಮನ ಕೈಗೆ ಹಾಗೂ ಬಾಯಿಗೆ ಗಾಯವಾಗಿದ್ದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೊಂದು ಬೈಕಿನಲ್ಲಿದ್ದ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.