ಮತಪೆಟ್ಟಿಗೆಯೊಂದಿಗೆ ಹೊರಟಿದ್ದ ಬಸ್: 10ಕ್ಕೂ ಹೆಚ್ಚು ಚುನಾವಣಾಧಿಕಾರಿ, ಪೊಲೀಸರಿಗೆ ಗಾಯ
1 min read
ವಿಜಯಪುರ: ಗ್ರಾಮ ಪಂಚಾಯತಿ ಚುನಾವಣೆ ಮುಗಿದ ನಂತರ ಬಸ್ಸಿನಲ್ಲಿ ಮತಪೆಟ್ಟಿಗೆ ಸಮೇತ ತಾಲೂಕು ಕಚೇರಿಗೆ ಹೋಗುತ್ತಿದ್ದ ಸಮಯದಲ್ಲಿ ಟಿಪ್ಪರ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಚುನಾವಣಾ ಅಧಿಕಾರಿಗಳು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಕ್ರಾಸ್ ಬಳಿ ಸಂಭವಿಸಿದೆ.
ಮುದ್ದೇಬಿಹಾಳ ತಾಲೂಕಿನ ಹುಲ್ಲೂರು, ಕೊಪ್ಪ ತಾಂಡಾ, ಕೊಪ್ಪ, ಸಿದ್ದಾಪುರ ಗ್ರಾಮದಲ್ಲಿ ನಡೆದ ಮತದಾನದ ನಂತರ ಮತಪೆಟ್ಟಿಗೆಗಳನ್ನ ತೆಗೆದುಕೊಂಡು ಬರುವಾಗ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನ ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮುದ್ದೇಬಿಹಾಳ ತಹಶೀಲ್ದಾರರು ಆಗಮಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ.
ಬಸ್ಸಿನಲ್ಲಿ ಚುನಾವಣಾ ಅಧಿಕಾರಿಗಳ ಜೊತೆಗೆ ಪೊಲೀಸರು ಇದ್ದರು. ಪ್ರಕರಣ ಮುದ್ದೇಬಿಹಾಳ ಠಾಣೆಯಲ್ಲಿ ದಾಖಲಾಗಿದೆ.