ರಸ್ತೆ ಅಪಘಾತ: ಶಾಸಕನ ಸಹೋದರ ದುರ್ಮರಣ
1 min read
ವಿಜಯಪುರ:ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಶಾಸಕರೊರ್ವರ ಸಹೋದರ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಹಿಟ್ಟಿನಹಳ್ಳಿ ಬಳಿ ಸಂಭವಿಸಿದೆ.
ವಿಜಯಪುರ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ದೊಡ್ಡಪ್ಪನ ಪುತ್ರ ಗಂಗಾರಾಮ ಚವ್ಹಾಣ (59) ಮೃತ ದುರ್ದೈವಿ. ಇನ್ನೊಂದು ಬೈಕ್ ಸವಾರನಿಗೂ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಾಸಕರ ಸಹೋದರ ಗಂಗಾರಾಮ ಅವರಿಗೆ ಘಟನೆಯಲ್ಲಿ ತೀವ್ರ ಥರದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನ ಆಸ್ಪತ್ರೆಗೆ ರವಾನೆ ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.