ರಾಜ್ಯದ ಬಿಜೆಪಿ ಶಾಸಕನಿಗೆ ಜಾಮೀನು-ಇದು “ಆ” ಕೇಸು
1 min read
ಮೈಸೂರು: ಪ್ರೇಮಕುಮಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತವಾಗಿ ನ್ಯಾಯಾಲಯಕ್ಕೆ ಗೈರಾಗಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನಿಗೆ ಜಾಮೀನು ನೀಡಿದ ಪ್ರಕರಣ ಮೈಸೂರಿನಲ್ಲಿ ನಡೆದಿದೆ.
ಪ್ರೇಮ ಕುಮಾರಿ-ರಾಮದಾಸ್ ಪ್ರಕರಣದಲ್ಲಿ ಶಾಸಕ ರಾಮದಾಸ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ನೀಡಲಾಗಿದ್ದು, ವಿಶೇಷ ನ್ಯಾಯಾಲಯಕ್ಕೆ ಸತತ ಗೈರು ಹಿನ್ನೆಲೆಯಲ್ಲಿ, ನ್ಯಾಯಾಲಯ ರಾಮದಾಸ್ ವಿರುದ್ದ ಜಾಮಿನು ರಹಿತ ವಾರೆಂಟ್ ಹೊರಡಿಸಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾಗಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿದೆ.
2014ರಲ್ಲಿ ರಾಮದಾಸ್ ವಿರುದ್ದ ಪ್ರೇಮಕುಮಾರಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ಮುಂದುವರಿಸಿದ ವಿಶೇಷ ನ್ಯಾಯಾಲಯ.