Posts Slider

Karnataka Voice

Latest Kannada News

ಹುಟ್ಟುಹಬ್ಬದ ಮುನ್ನಾ ದಿನವೇ ಸಿಬಿಐ ವಶಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ

1 min read
Spread the love

ಧಾರವಾಡ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. 2016ರ ಜೂನ್ 15ರಂದು ನಡೆದಿದ್ದು ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಾಗಿದೆ ಎಂದು ತಿಳಿದು ಬಂದಿದೆ.

ಕೆಲ ಹೊತ್ತಿಗೆ ಮೊದಲು ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ನಿವಾಸದಲ್ಲಿ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ಅಲ್ಲಿನ ಉಪ ನಗರ ಪೊಲೀಸ್ ಠಾಣೆಯಲ್ಲಿ ಸಿಬಿಐ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 2016ರಲ್ಲಿ ನಡೆದಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆಗ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿದ್ದ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿ ಬಂದಿತ್ತು. ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕುಲಕರ್ಣಿ ಅವರು ಶಾಮಿಲಾಗಿದ್ದಾರೆ ಎಂದು ಆರೋಪಿಸಿದ್ದರು.

ಕೆಲ ತಿಂಗಳುಗಳ ಹಿಂದಷ್ಟೇ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರು ಸಿಬಿಐ ವಿಚಾರಣೆ ಎದುರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರಕರಣದಿಂದ ಬಚಾವಾಗಲು ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಪ್ರಯತ್ನ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಆದರೆ ಆ ಆರೋಪವನ್ನು ವಿನಯ್ ಕುಲಕರ್ಣಿ ನಿರಾಕರಿಸಿದ್ದರು. ಜೊತೆಗೆ ಬಿಜೆಪಿ ನಾಯಕರೂ ಕೂಡ ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು.


Spread the love

Leave a Reply

Your email address will not be published. Required fields are marked *