ಧಾರವಾಡ ಜಿಲ್ಲಾ ಕಾಂಗ್ರೆಸ್ ಗೌರವ ಹೆಚ್ಚಿಸಿದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರಿಗೆ ಎಲ್ಲೆಡೆ ಸತ್ಕಾರ
1 min read
ಧಾರವಾಡ: ಜಿಲ್ಲೆಯ ನಾಲ್ಕು ಪುರಸಭೆಗಳಲ್ಲಿ ಒಂದೇ ಒಂದು ಕಡೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನ ಹಿಡಿದಿದ್ದು, ಕಾಂಗ್ರೆಸ್ ಗೌರವವನ್ನ ಜಿಲ್ಲೆಯಲ್ಲಿ ಉಳಿಸಿದಂತಾಗಿದೆ. ಹೀಗಾಗಿ ರಾಜ್ಯ ನಾಯಕರು ಹಾಗೂ ಪ್ರಮುಖರು ನವಲಗುಂದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆಯ ಹೊಳೆಯನ್ನೇ ಹರಿಸುತ್ತಿದ್ದಾರೆ.
ನವಲಗುಂದ ಪುರಸಭೆಯಲ್ಲಿ ಬಿಜೆಪಿಯ ಬಾಹ್ಯ ಬೆಂಬಲ ಪಡೆದು ಅಧಿಕಾರ ಪಡೆದಿರುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಜಾಧವ ಹಾಗೂ ಉಪಾಧ್ಯಕ್ಷೆ ಖೈರುನಬಿ ನಾಶಿಪುಡಿಯವರನ್ನ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸತ್ಕರಿಸಲಾಯಿತು.
ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸದಸ್ಯರನ್ನ ಸನ್ಮಾನ ಮಾಡಲಾಯಿತು. ನವಲಗುಂದ ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ, ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಇದೇ ಸಮಯದಲ್ಲಿ ಶ್ರೀ ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿದ ನವಲಗುಂದ ಪುರಸಭೆ ತಂಡಕ್ಕೆ ಮಠದ ವತಿಯಿಂದಲೂ ಸತ್ಕರಿಸಲಾಯಿತು.