ಪೊಲೀಸ್ ಕಮೀಷನರ್-ಡಿಸಿಪಿ ವರ್ಗಾವಣೆ: ಕೊನೆಗೂ ಎಚ್ಚೇತ್ತ ಗೃಹ ಸಚಿವ ಬಸವರಾಜ ಬೊಮ್ಮಾಯಿ
1 min read
ಬೆಂಗಳೂರು: ಐಪಿಎಸ್ ಗಳ ಗುದಮುರಗಿಯಿಂದ ಖ್ಯಾತಿ ಪಡೆದಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಕಚೇರಿಯಿಂದ ಇಬ್ಬರೂ ಐಪಿಎಸ್ ಗಳನ್ನ ಎತ್ತಂಗಡಿ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಆರ್.ದಿಲೀಪ್ ಅವರನ್ನ ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ಐಪಿಎಸ್ ಅಧಿಕಾರಿ ಲಾಬೂರಾಂ ಅವರನ್ನ ಪೊಲೀಸ್ ಕಮೀಷನರ್ ಹುದ್ದೆಗೆ ವರ್ಗಾವಣೆ ಮಾಡಿದ್ದಾರೆ.
ಡಿಸಿಪಿ ಪಿ.ಕೃಷ್ಣಕಾಂತರನ್ನ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನ ಜಾಗ ತೋರಿಸದೇ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಂದಾಣಿಕೆಯ ಕೊರತೆಯಿಂದ ರಾಜಕಾರಣಿಗಳು ಕೂಡಾ ಬೇಸರವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡಾ ಎಚ್ಚರಿಕೆ ನೀಡಿದ್ದರು.