ಪೊಲೀಸ್ ಆಯುಕ್ತ ಕಮೀಷನರ್ ಲಾಬು ರಾಮ ಆರೋಗ್ಯ ಸುಧಾರಣೆ
1 min read
ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬುರಾಮ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನೆರಡು ದಿನದಲ್ಲಿ ಸಂಪೂರ್ಣವಾಗಿ ಗುಣಮುಖರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಆಯುಕ್ತ ಲಾಬು ರಾಮ್ ಅವರನ್ನ ಡಾ.ಅಶೋಕ ನಾಯಕ ನೋಡಿಕೊಂಡಿದ್ದರು. ಚೇತರಿಕೆ ಕಾಣುತ್ತಿದ್ದಾಗಲೇ ಬೆಂಗಳೂರಿಗೆ ಕರೆತರಲಾಗಿದೆ.
ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಆರೋಗ್ಯದಲ್ಲಿ ತೀವ್ರವಾಗಿ ಸುಧಾರಣೆ ಕಂಡು ಬಂದಿದೆ. ಇನ್ನೆರಡು ದಿನದಲ್ಲಿ ಸಂಪೂರ್ಣವಾಗಿ ಗುಣಮುಖರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಲಾಬು ರಾಮ್ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು.