ಧಾರವಾಡ ಸಪ್ತಾಪುರದಲ್ಲಿ ಕೊರಳಿಗೆ ಚಾಕು ಇರಿತ

ಧಾರವಾಡ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಓರ್ವ ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ಧಾರವಾಡದ ಸಪ್ತಾಪುರ ಬಳಿ ಸಂಭವಿಸಿದೆ.
ಧಾರವಾಡದ ಲಕ್ಷ್ಮೀಸಿಂಗನಕೇರಿ ನಿವಾಸಿಯಾದ ಕಾಂತೇಶ ಲಮಾಣಿ ಎಂಬ ಯುವಕನ ಕೊರಳಿಗೆ ಚಾಕುವಿನಿಂದ ಇರಿಯಲಾಗಿದೆ.
ಗಂಭೀರವಾಗಿ ಗಾಯಗೊಂಡ ಯುವಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರು ಯುವಕರು ಚಾಕು ಇರಿದು ಪರಾರಿಯಾಗಿದ್ದಾರೆ.
ಘಟನೆಯ ಬಗ್ಗೆ ಧಾರವಾಡ ಉಪನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಲಾಗಿದೆ.