Posts Slider

Karnataka Voice

Latest Kannada News

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ವಿಧಿವಶ

1 min read
Spread the love

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಸದಸ್ಯೆಯಾಗಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಅಕಾಲಿಕವಾಗಿ ನಿಧನರಾಗಿದ್ದು, ಇಂದು ಸಂಜೆ ಹುಬ್ಬಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಕಾಂಗ್ರೆಸ್ ಪಕ್ಷದಿಂದ ಮಹಾನಗರ ಪಾಲಿಕೆಯ ಸದಸ್ಯೆಯಾಗಿದ್ದ ನಿರ್ಮಾಲಾ ಖಂಡೇಕರ ಇಂದು ಬೆಳಿಗ್ಗೆ 11ಗಂಟೆಗೆ ನಿಧನರಾಗಿದ್ದು, ಇವರ ಪತಿ ಫೀರಾಜಿ ಖಂಡೇಕರ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಕೇಶ್ವಾಪುರದ ಮುಕ್ತಿಧಾಮದಲ್ಲಿ ನಡೆಯಲಿದೆ.

ಸಂತಾಪ: ನಿರ್ಮಲಾ ಪೀರಾಜಿ ಖಂಡೇಕಾರ ನಿಧನಕ್ಕೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಹುಬ್ಬಳ್ಳಿ ನಗರದ ಕೇಶ್ವಾಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಕಾರ್ಯಗಳನ್ನ ಮಾಡಿ, ಜನರ ಮನದಲ್ಲಿ ಉಳಿದಿದ್ದ ನಿರ್ಮಾಲಾ ಅವರ ಸಾವು, ಈ ಭಾಗದ ಜನರಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.


Spread the love

Leave a Reply

Your email address will not be published. Required fields are marked *