ಧಾರವಾಡದಲ್ಲಿ ಗಾಂಜಾ ಮಾರಾಟ: ಇಬ್ಬರು ಗಾಂಜಿಗರ ಬಂಧನ
1 min read
ಧಾರವಾಡ: ಶಹರದ ಹೊಸ ಎಪಿಎಂಸಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬಂಧನ ಮಾಡುವಲ್ಲಿ ನಗರ ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ಧಾರವಾಡ ನಗರದ ಹಾವೇರಿಪೇಟೆ ನಿವಾಸಿ ಮಲ್ಲಿಕಜಾನ ಮೊಹ್ಮದಹನೀಫ ಸೌದಾಗರ ಹಾಗೂ ಧಾರವಾಡ ತಾಲೂಕಿನ ಕಲ್ಲೂರ ಗ್ರಾಮದ ಉಳವಪ್ಪ ಬಸಪ್ಪ ತಳವಾರ ಎಂದು ಗುರುತಿಸಲಾಗಿದೆ. ಬಂಧಿತರಿಂದ 541 ಗ್ರಾಂ ಗಾಂಜಾ ಹಾಗೂ ಎರಡು ಮೊಬೈಲಗಳನ್ನ ವಶಕ್ಕೆ ಪಡೆಯಲಾಗಿದೆ.
ಇನ್ಸಪೆಕ್ಟರ್ ಎಂ.ಎಸ್.ಹೂಗಾರ ನೇತೃತ್ವದಲ್ಲಿ ದಾಳಿ ನಡೆದು, ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಳಿನಗರದಲ್ಲಿ ಗಾಂಜಾ ಮಾರಾಟ ತಡೆಯಲು ನಿರಂತರವಾಗಿ ದಾಳಿಗಳು ನಡೆಯುತ್ತಿದ್ದು, ಪೊಲೀಸರ ಕಣ್ತಪ್ಪಿಸಿ ಇನ್ನೂ ಗಾಂಜಾ ಮಾರಾಟ ನಡೆಯುತ್ತಿದೆ.
ಗಾಂಜಿಗರನ್ನ ಬಂಧನ ಮಾಡುವಲ್ಲಿ ಯಶಸ್ವಿಯಾದ ಇನ್ಸಪೆಕ್ಟರ್ ಎಂ.ಎಸ್.ಹೂಗಾರ ತಂಡವನ್ನ ಪೊಲೀಸ್ ಕಮೀಷನರ್ ಲಾಬುರಾಮ ಶ್ಲಾಘಿಸಿದ್ದಾರೆ.