ಗ್ರಾಪಂ ಚುನಾವಣೆ: ಸೋತ ಅಭ್ಯರ್ಥಿ ನೇಣಿಗೆ ಶರಣು
1 min read
ಚಿತ್ರದುರ್ಗ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಗೆಲುವು ಕಾಣದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾ. ಖಂಡೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ಕಳೆದ ವಾರ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧೆಯಲ್ಲಿ ಅಭ್ಯರ್ಥಿಯಾಗಿದ್ದ ನರಸಿಂಹಮೂರ್ತಿ ಮನನೊಂದು ನೇಣಿಗೆ ಶರಣಾಗಿದ್ದಾನೆ. 26 ವರ್ಷದ ನರಸಿಂಹಮೂರ್ತಿ ಚುನಾವಣೆ ಸಮಯದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡಿದ್ದ. ಚುನಾವಣೆ ಸಮಯದಲ್ಲಿ ಬಹುತೇಕ ಮತದಾರರು ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದರು.
ಇದೇಲ್ಲದರ ನಡುವೆ ಚುನಾವಣೆಯಲ್ಲಿ ಸೋತ ನಂತರ ಮನೆಯಲ್ಲಿಯೇ ನೇಣು ಹಾಕಿಕೊಂಡು ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಅಬ್ಬಿನಹೊಳೆ ಪಿಎಸ್ಐ ಪರಶುರಾಮ ಲಮಾಣಿ ಭೇಟಿ ಪರಿಶೀಲನೆ ನಡೆಸಿದ್ದಾರೆ.