‘ಅಂದಿಗೆ’ ಗಾಂಧಿ ತಾತಾ ಹುಬ್ಬಳ್ಳಿಗೆ ಬಂದ್ಹೋಗಿ 100 ವರ್ಷ: ‘ಅವತ್ತು’ ಕಾಂಗ್ರೆಸ್ ಏನ್ ಮಾಡ್ತಿದೆ ಗೊತ್ತಾ..?
1 min read
ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು 1920 ರ ನವೆಂಬರ್ 10 ಹಾಗೂ 11 ರಂದು ಮೊದಲ ಬಾರಿ ಧಾರವಾಡ ಹಾಗೂ ಹುಬ್ಬಳ್ಳಿಗೆ ಭೇಟಿ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೋತ್ಸಾಹಿಸಿದ್ದರು. ಈ ದಿನಕ್ಕೆ ಈಗ ನೂರು ವರ್ಷದ ಸಂಭ್ರಮ.
ಈ ಹಿನ್ನೆಲೆಯಲ್ಲಿ ಇದೇ ನವೆಂಬರ್ 11 ರಂದು ಬುಧವಾರ ಮಧ್ಯಾಹ್ನ 12-00 ಗಂಟೆಗೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಧಾರವಾಡ ಗ್ರಾಮೀಣ ಜಿಲ್ಲಾ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಮತ್ತು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ , ಖ್ಯಾತ ಭಾಷಾ ತಜ್ಞ ಗಣೇಶ ದೇವಿ ಹಾಗೂ ಜಿಲ್ಲೆಯ ಶಾಸಕರು ಸೇರಿದಂತೆ ಸ್ಥಳೀಯ ಎಲ್ಲ ಕಾಂಗ್ರೆಸ್ ಮುಖಂಡರು ಆಗಮಿಸಲಿದ್ದಾರೆ.
ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಜಿಲ್ಲಾ ಅಧ್ಯಕ್ಷರು, ಮಾಜಿ ಕೆಪಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು ಸೇರಿದಂತೆ ಕಾರ್ಯಕರ್ತರು ಆಗಮಿಸುವಂತೆ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ ಕೋರಿದ್ದಾರೆ.