Posts Slider

Karnataka Voice

Latest Kannada News

ಜಗದೀಶ ಶೆಟ್ಟರಂತೆ ಕೀಳು ರಾಜಕೀಯ ಮಾಡಲ್ಲ: ಬಿಜೆಪಿ ಶಾಸಕ

1 min read
Spread the love

ವಿಜಯಪುರ: ನಾನೂ ಜಗದೀಶ ಶೆಟ್ಟರಂತೆ ಕೀಳು ಮಟ್ಟದ ರಾಜಕೀಯ ಮಾಡಲ್ಲ. ಮುಖ್ಯಮಂತ್ರಿಯಾದವರು ಮಂತ್ರಿಯಾಗಿದ್ದರಲ್ಲಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪೂರ್ಣ ವೀಡಿಯೋ ಇಲ್ಲಿದೆ ನೋಡಿ..

ಜಗದೀಶ ಶೆಟ್ಟರ ಅವರಂತೆ ನಾನೇನು ಕೀಳು ರಾಜಕಾರಣ ಮಾಡುವುದಿಲ್ಲ. ನಾನೇನು ಸಿಎಂ ಆದ ಬಳಿಕ ಸಚಿವನಾಗಿಲ್ಲ. ಅವರು ಸಚಿವರಾಗುವ ಅವಶ್ಯಕತೆ ಇರಲಿಲ್ಲ. ಯುವಕರಿಗೆ ಅವಕಾಶ ನೀಡಬಹುದಿತ್ತು. ಶೆಟ್ಟರ್ ಸುಮ್ಮನೆ ನನ್ನ ಬಗ್ಗೆ ಮಾತನಾಡಬಾರದು. ನನ್ನ ಬಳಿ ಬಹಳ‌‌ ಜನರ ಇತಿಹಾಸವಿದೆ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಾವು ಅಭಿವೃದ್ದಿ ಬಗ್ಗೆ ಮಾತನಾಡಿದ್ದಕ್ಕೆ ನನಗೆ ನೀಡಿದ್ದ ಭದ್ರತೆ ಹಿಂಪಡೆದಿದ್ದಾರೆ. ನಾವು ಕೇಳಿದರೆ ಹಣ ಇಲ್ಲ ಅಂತಾರೆ. ಜಮೀರ ಅಹ್ಮದ ಕೇಳಿದರ ಹಣ ನೀಡುತ್ತಾರೆ. ನಾಲ್ಕೈದು ಜನ ಕಾಂಗ್ರೆಸ್ ಶಾಸಕರಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಈ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ ಎಂದರು.


Spread the love

Leave a Reply

Your email address will not be published. Required fields are marked *