ರಾಯಚೂರು ಬಳಿ ಕಾರುಗಳು ಡಿಕ್ಕಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ
1 min read
ರಾಯಚೂರು: ವೇಗವಾಗಿ ಹೊರಟಿದ್ದ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಗರದ ಸಮೀಪದ ಮಂಜರ್ಲಾ ಬಳಿ ನಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.
ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅಭಿಷೇಕ್, ಬಸವರಾಜ್, ಗಣೇಶ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ರಾಯಚೂರಿನ ನವೋದಯ ಕಾಲೇಜಿನಲ್ಲಿ ಓದುತ್ತಿದ್ದರು. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವೇಗವಾಗಿ ಚಲಾಯಿಸುತ್ತಿರುವುದೇ ಘಟನೆಗೆ ಕಾರಣವಾಗಿದ್ದು, ಒಂದು ಕಾರಂತೂ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು, ವಾಹನದ ರೂಪವೇ ಬದಲಾಗಿದೆ.