ಬ್ಯಾಂಕ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ ಪೊಲೀಸ್ ಕಮೀಷನರ್ ಲಾಬುರಾಮ್
1 min read
ಹುಬ್ಬಳ್ಳಿ: ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕುಗಳು ಹಣಕಾಸು ಅವ್ಯವಹಾರಗಳನ್ನು ತಡೆಯಲು ಹಾಗೂ ಎಟಿಎಂ ಭದ್ರತೆಗೆ ಭಾರತೀಯ ರಿಸರ್ವ್ ಬ್ಯಾಂಕು ಕಾಲಕಾಲಕ್ಕೆ ನೀಡುವ ಸುರಕ್ಷತೆ ಮತ್ತು ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಹೇಳಿದರು.
ನವನಗರದ ತಮ್ಮ ಕಚೇರಿಯಲ್ಲಿ ಇಂದು ನಡೆದ ಬ್ಯಾಂಕುಗಳ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ಯಾಂಕುಗಳ ಸುರಕ್ಷತಾ ಕ್ರಮಗಳಿಗೆ ಪೊಲೀಸ್ ಇಲಾಖೆಯು ಎಲ್ಲಾ ಸಹಕಾರ ನೀಡಲಿದೆ.ಗ್ರಾಹಕರ ಹಣಕಾಸು ವ್ಯವಹಾರ ಭದ್ರತೆ ಹಾಗೂ ಜಾಗೃತಿ ನೀಡುವುದು ಮುಖ್ಯವಾಗಿದೆ ಎಂದರು.
ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ ರಾಮರಾಜನ್ ಮಾತನಾಡಿ,ಗ್ರಾಹಕರಿಗೆ ಬ್ಯಾಂಕುಗಳ ಹೆಸರಿನಲ್ಲಿ ಹಣಕಾಸು ವಂಚನೆ ಮಾಡುವುದನ್ನು ನಿಯಂತ್ರಿಸಲು ವಿಚಕ್ಷಣಾ ಕಾರ್ಯ ನಡೆಸಬೇಕು. ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಅಣ್ಣಯ್ಯ ಸಭೆ ಆಯೋಜಿಸಿದ್ದರು.
ಧಾರವಾಡ ಜಿಲ್ಲಾ ಪೊಲೀಸ್ ಕಚೇರಿಯ ಡಿವೈಎಸ್ ಪಿ ಸಂಕದ, ಜಿಲ್ಲೆಯ ವಿವಿಧ ಬ್ಯಾಂಕುಗಳ ಪ್ರಾದೇಶಿಕ ಉಪ ಮುಖ್ಯಸ್ಥರು, ಸುರಕ್ಷತಾ ಅಧಿಕಾರಿಗಳು, ಜಿಲ್ಲಾ ಸಂಯೋಜಕರು ಸಭೆಯಲ್ಲಿ ಭಾಗವಹಿಸಿದ್ದರು.