ಸಂತೋಷ ಲಾಡ ಮಧ್ಯಾಹ್ನ ಅಳ್ನಾವರ; ಸಂಜೆ ಕಲಘಟಗಿ ಭೇಟಿ, ಸಭೆ
1 min read
ಧಾರವಾಡ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಂತೋಷ ಲಾಡ ಗ್ರಾಮ ಪಂಚಾಯತಿ ಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಯಲ್ಲೂ ಪಕ್ಷದ ಕಾರ್ಯಕರ್ತರು ಗೆಲ್ಲುವ ಸಾಧಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಲಿದ್ದಾರೆ.
ಮಾಜಿ ಶಾಸಕ ಸಂತೋಷ ಲಾಡ, ಇಂದು ಬೆಳಗಾವಿಗೆ ಆಗಮಿಸಿ ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಮದುವೆಯಲ್ಲಿ ಭಾಗವಹಿಸಿ, ಅಲ್ಲಿಂದ ನೇರವಾಗಿ ಅಳ್ನಾವರಕ್ಕೆ ಆಗಮಿಸಿ, ಕಾರ್ಯಕರ್ತರ ಸಭೆಯನ್ನ ನಡೆಸಲಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೆಸ್ ಮುಖಂಡರು, ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಇನ್ನಷ್ಟು ಉತ್ಸಾಹ ತುಂಬಲು ಸಂತೋಷ ಲಾಡ ಆಗಮನ ಪುಷ್ಠಿ ನೀಡಲಿದೆ.
ಕಲಘಟಗಿ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಶಾಸಕರಿದ್ದರೂ ಕೂಡಾ, ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ಸಾಧ್ಯತೆಗಳಿವೆ ಎಂಬುದು ಇದೀಗ ಕ್ಷೇತ್ರದಲ್ಲಿ ಕಂಡು ಬರುತ್ತಿರುವ ಚಿತ್ರಣ.