SSLC ಪರೀಕ್ಷೆ ದಿನಾಂಕ ನಿಗದಿ: ಸಚಿವ ಸುರೇಶಕುಮಾರ ಮಾಹಿತಿ
1 min read
ಬೆಂಗಳೂರು: ರಾಜ್ಯದಲ್ಲಿ ವಿದ್ಯಾಗಮ ನಡೆಯುತ್ತಿದ್ದ ಸಮಯದಲ್ಲಿಯೇ ಎಸ್.ಎಸ್.ಎಲ್.ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 14ರಿಂದ 25ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಮಾಹಿತಿ ನೀಡಿದರು.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶಕುಮಾರ ಅವರು, ಈ ಬಾರಿ ಪರೀಕ್ಷಾ ಅವಧಿ 3 ಗಂಟೆ 15 ನಿಮಿಷಗಳ ಕಾಲ ಇರಲಿದ್ದು, ಜೂನ್ 14ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದೆ ಎಂದರು.
ಜೂನ್ 14ರಂದು ಪ್ರಥಮ ಭಾಷೆ
ಜೂನ್ 16ರಂದು ಗಣಿತ, ಸಮಾಜಶಾಸ್ತ್ರ
ಜೂನ್ 18ರಂದು ದ್ವಿತೀಯ ಭಾಷೆ ಇಂಗ್ಲೀಷ್ ಅಥವಾ ಕನ್ನಡ
ಜೂನ್ 21ರಂದು ವಿಜ್ಞಾನ
ಜೂನ್ 23ರಂದು ತೃತೀಯ ಭಾಷೆ
ಜೂನ್ 25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಫೆಬ್ರವರಿ 1ರಿಂದ 9ನೇ ತರಗತಿ, 10ನೇ ತರಗತಿ ಹಾಗೂ 11, 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. 1-5ನೇ ತರಗತಿ ಆರಂಭಿಸುವ ಬಗ್ಗೆ ಫೆಬ್ರವರಿ 2ನೇ ವಾರದಿಂದ ನಿರ್ಧರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಖಾಸಗಿ ಶಾಲೆಗಳ ಶುಲ್ಕ ನಿಗದಿ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರವಾಗಿಲ್ಲ. ಶುಲ್ಕ ನಿಗದಿ ಬಗ್ಗೆ ಪ್ರತ್ಯೇಕ ಸಲಹಾ ಸಮಿತಿ ಜೊತೆ ಚರ್ಚಿಸಬೇಕಿದೆ. ಆ ಬಳಿಕ ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶಕುಮಾರ ಹೇಳಿದರು.