ಕುಸುಗಲ್ಲ್ ಗ್ರಾಮದಲ್ಲಿ ಆಹಾರ ಧಾನ್ಯದ ಕಿಟ್ ವಿತರಣೆ: ಓದುವ ಬೆಳಕು
1 min read
ಹುಬ್ಬಳ್ಳಿ: ಸರಕಾರವು ಕೋವಿಡ್-19 ಸಮಯದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಾಗಿ, ಆಹಾರ ಭದ್ರತೆ ಕಾಯ್ದೆಯ ಅನ್ವಯ ನಿಯಮಾನುಸಾರ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಿಸುತ್ತಿದ್ದು, ಅವುಗಳ ಸದುಪಯೋಗ ಮಾಡಿಕೊಂಡು ಗುಣಾತ್ಮಕ ಶಿಕ್ಷಣ ಪಡೆಯಬೇಕೆಂದು ಧಾರವಾಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ: ಡಾ.ಬಿ.ಸುಶೀಲಾ ರವರು ಹೇಳಿದರು.
ಹುಬ್ಬಳ್ಳಿ ಗ್ರಾಮೀಣ ವಲಯದ ಕುಸುಗಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ, “ಮಕ್ಕಳ ಗ್ರಾಮಸಭೆ, ಆಹಾರ ಧಾನ್ಯಗಳ ಕಿಟ್ ವಿತರಣೆ ಮತ್ತು ಓದುವ ಬೆಳಕು” ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿ, ಸರಕಾರವು 10 ವಾರಗಳ ಕಾಲ ವಿನೂತನ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಜರುಗಿಸುತ್ತಿದ್ದು, ಓದಿನೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳಬೇಕೆಂದು ಹೇಳಿದರು
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷರಾದ ಶಿವಾನಂದ ಕರಿಗಾರ, ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಹನಕುಮಾರ ಹಂಚಾಟೆ, ಕ್ಷೇತ್ರಶಿಕ್ಷಣಾಧಿಕಾರಿ ಅಶೋಕ ಕುಮಾರ ಸಿಂದಗಿ, ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಬಸವರಾಜ ಮಾಯಾಚಾರ್ಯ, ಸಹಾಯಕ ನಿರ್ದೇಶಕ ಶ್ರೀಧರ ಪತ್ತಾರ, ಮಕ್ಕಳ ರಕ್ಷಣಾ ಘಟಕದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತಿಯ ಪದಾಧಿಕಾರಿಗಳು, ಎಸ್.ಡಿ.ಎಂ.ಸಿ ಯವರು,ಶಾಲಾ ಮುಖ್ಯಶಿಕ್ಷಕರು ಮತ್ತು ಗಣ್ಯರು ಉಪಸ್ಥಿತರಿದ್ದರು.