ಎರಡೇ ವರ್ಷದಲ್ಲಿ 20ಸಾವಿರ ಶಿಕ್ಷಕರ ನೇಮಕ: ಸಚಿವ ಸುರೇಶಕುಮಾರ
1 min read
ಬೆಂಗಳೂರು: ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶಕುಮಾರ ಹೇಳಿದ್ದಾರೆ.
ರಾಜ್ಯ ಸರಕಾರಿ ನೌಕರರ ಸಂಘ, ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಹಲವಾರು ಸಂಘಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವರು, ಈ ವಿಷಯವನ್ನ ಪ್ರಕಟಿಸಿದ್ದಾರೆ.
ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಶಿಕ್ಷಕಮಿತ್ರ ಆ್ಯಪ್ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂಧನೆ ಮಾಡಲಾಗುತ್ತಿದೆ. 2500 ಟಿಜಿಟಿ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗಿದೆ ಎಂದರು.
ಎಲ್ಲ ಸಂಘಟನೆಗಳ ಪದಾಧಿಕಾರಿಗಳು, ಸರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರರ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಸಭೆಯಲ್ಲಿ ಉಪಸ್ಥಿತರಿದ್ದರು.