Posts Slider

Karnataka Voice

Latest Kannada News

ವೀಡಿಯೋ ಸಂವಾದದ ಮೂಲಕ ಕಾನೂನು ಅರಿವು ಕಾರ್ಯಕ್ರಮ

1 min read
Spread the love

ಹುಬ್ಬಳ್ಳಿ: ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಅರಿವು ಸಪ್ತಾಹ ಅಂಗವಾಗಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ವಿಡಿಯೋ ಸಂವಾದದ ಮೂಲಕ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ.

ಅ.28 ರಂದು ಕಾರ್ಮಿಕ ಇಲಾಖೆ ಹಾಗೂ ಅ.29 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಾಯಿತು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಸುಮಂಗಲಾ ಎಸ್ ಬಸವಣ್ಣೂರ , ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ದೇವಿಂದ್ರಪ್ಪ ಎನ್, ಜೆ.ಎಂ.ಎಫ್.ಸಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಪಲ್ಲೇದ, ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮಾದೇಶ್. ವಿ, ಸಂವಾದದಲ್ಲಿ ಭಾಗಿಯಾಗಿದ್ದರು.


Spread the love

Leave a Reply

Your email address will not be published. Required fields are marked *