ಕೆಲವೇ ಸಮಯದಲ್ಲಿ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ
1 min read
ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಯ ವಿಚಾರಣೆಯು ಇನ್ನೂ ಕೆಲವೇ ಹೊತ್ತಿನಲ್ಲಿ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಕಳೆದ ಹದಿನೈದು ದಿನದ ಹಿಂದೆ ಸಿಬಿಐನಿಂದ ಬಂಧಿತರಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿಯವರ ಜಾಮೀನಿಗಾಗಿ ನ್ಯಾಯವಾದಿ ವಿ.ಭರತಕುಮಾರ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ನಿನ್ನೆ ದಿನಾಂಕವನ್ನ ನಿಗದಿ ಮಾಡಲಾಗಿತ್ತಾದರೂ, ಸಿಬಿಐಗೆ ಇಂದು ಆಕ್ಷೇಪಣೆ ಸಲ್ಲಿಸಲು ಇಂದಿಗೆ ಮುಂದೂಡಲಾಗಿತ್ತು.
ಇಂದು ಸಿಬಿಐ ಜಾಮೀನಿಗೆ ಸಂಬಂಧಿಸಿದ ಹಾಗೇ ತನ್ನ ನಿಲುವನ್ನ ತಿಳಿಸಲಿದ್ದು, ಕೆಲವೇ ಹೊತ್ತಿನಲ್ಲಿ ಈ ಬಗ್ಗೆ ಆದೇಶ ಹೊರಬೀಳಲಿದೆ. 2106ರ ಜೂನ್ 15 ರಂದು ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆಯಾಗಿತ್ತು.
ಈ ಪ್ರಕರಣದ ಕುರಿತಂತೆ ಹಲವು ಮಜಲುಗಳ ನಂತರ ತನಿಖೆಯನ್ನ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಮೇಲೆ ಸಿಬಿಐಗೆ ನೀಡಿತ್ತು. ಅದಕ್ಕೆ ಸಂಬಂಧಿಸಿದಂತೆ ತನಿಖೆಯು ತೀವ್ರ ಗತಿಯಲ್ಲಿ ನಡೆಯುತ್ತಿದ್ದು, ಅದೀಗ ಈ ಹಂತಕ್ಕೆ ಬಂದು ತಲುಪಿದೆ.