ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ
1 min read
ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಅವಧಿಯನ್ನ ಮತ್ತೆ 14 ದಿನಗಳವರೆಗೆ ಮುಂದೂಡಿ ಆದೇಶ ಹೊರಡಿಸಲಾಗಿದೆ.
ನವೆಂಬರ್ 5ರಂದು ಸಿಬಿಐನಿಂದ ಬಂಧಿತರಾಗಿರುವ ವಿನಯ ಕುಲಕರ್ಣಿಯವರ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳವರೆಗೆ ಅಂದರೇ ಡಿಸೆಂಬರ್ 21ರ ವರೆಗೆ ಮುಂದೂಡಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನವಾಗಿ ಇಂದಿಗೆ ಬರೋಬ್ಬರಿ 33ದಿನಗಳಾಗಿದ್ದು, ಹಿಂಡಲಗಾ ಜೈಲಿನಲ್ಲಿಯೇ ದಿನ ನೂಕುತ್ತಿದ್ದಾರೆ. ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ವಿನಯ ಕುಲಕರ್ಣಿ ಪರ ಜಾಮೀನು ಅರ್ಜಿಯನ್ನ ಸಲ್ಲಿಸಿದ್ದು, ಅದರ ವಿಚಾರಣೆ ಇನ್ನೂ ನಡೆಯಬೇಕಿದೆ.