ಕುಮಾರಸ್ವಾಮಿ ಕ್ಷಮೆ ಕೇಳಲಿ: ಮುತಾಲಿಕ್

ಮಂಗಳೂರು ಗಲಭೆ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿರುವುದು ಖಂಡನೀಯ. ಈ ಕೂಡಲೇ ಕುಮಾರಸ್ವಾಮಿ ಪೊಲೀಸರ ಕ್ಷಮೆ ಕೇಳಬೇಕೆಂದು ಧಾರವಾಡದಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದ್ದಾರೆ.
ಪೊಲೀಸ್ ಇಲಾಖೆ ಯಾವುದೇ ಧರ್ಮ, ಪಕ್ಷ, ಜಾತಿಗೆ ಸಂಬಂಧಿಸಿದ್ದಲ್ಲ. ಸರಕಾರಿ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವ ಪೊಲೀಸರ ಬಗ್ಗೆ ಬೇಜವಾಬ್ದಾರಿಯಿಂದ ಮಾತನಾಡುವುದು ಸರಿಯಲ್ಲ ಎಂದು ಮುತಾಲಿಕ್ ಕುಟುಕಿದ್ದಾರೆ.