Posts Slider

ಬೇಲೂರು-ಕಾಡನಕೊಪ್ಪದ ಬಳಿ ಇಬ್ಬರು ಬೈಕ್ ಸವಾರರ ದುರ್ಮರಣ…!

1 min read
Spread the love

ಬೈಕ್-ಲಾರಿ ಡಿಕ್ಕಿ ಮುಮ್ಮಿಗಟ್ಟಿ ಗ್ರಾಮದ ವ್ಯಕ್ತಿ ಸಾವು…!

ಧಾರವಾಡ: ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮುಮ್ಮಿಗಟ್ಟಿಯ ಬಸನಗೌಡ ಎಂಬುವವರು ಮತ್ತೋಬ್ಬರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿಯು ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಬಸನಗೌಡ ಎಂಬುವವರನ್ನ ಕಿಮ್ಸಗೆ ರವಾನೆ ಮಾಡಲಾಗಿತ್ತು. ಆದರೆ, ಕಿಮ್ಸನಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದ್ದಾರೆ.

Belur Accident spot

ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸಿ ಸಂಜೆ ಹೋಗುವಾಗ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಅಷ್ಟೇ ಅಲ್ಲ, ರಾಷ್ಟ್ರೀಯ ಹೆದ್ದಾರಿಯಿಂದ ವಾಹನಗಳು ವೇಗವಾಗಿ ಸಂಚರಿಸುತ್ತಿರುತ್ತವೆ.

ಬೈಲೂರು ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸಿ ಹೋಗುವಾಗ ದುರ್ಘಟನೆ ನಡೆದಿದೆ. ಲಾರಿ ಚಾಲಕನನ್ನ ವಶಕ್ಕೆ ಪಡೆದಿರುವ ಗರಗ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

ಕಾಡನಕೊಪ್ಪದ ಬಳಿ ಬೈಕ್ ಅಪಘಾತ ಸಾವು..

ಬೈಕ್ ಸವಾರನೊಬ್ಬನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

kims

ಮೃತಪಟ್ಟ ವ್ಯಕ್ತಿ ಸುಮಾರು 35 ವಯಸ್ಸಿನವನಾಗಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ದ ಬಳಿಯಲ್ಲಿ ಈ ಘಟನೆ ನಡೆದಿದ್ದು,ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಬಲವಾದ ಹೊಡೆತ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತಪಟ್ಟ ವ್ಯಕ್ತಿಯ ಮಾಹಿತಿ ಇನ್ನು ಲಭ್ಯವಾಗಿಲ್ಲ ಸಧ್ಯ ಮೃತ ಪಟ್ಟ ವ್ಯಕ್ತಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಶವಾಗಾರದಲ್ಲಿರಿಸಲಾಗಿದ್ದು , ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

Your email address will not be published. Required fields are marked *