ಸರಕಾರಿ ವಸತಿ ಶಾಲೆಯಲ್ಲಿ 25 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಕೊಡಗು: ಜನೇವರಿ 11ರಿಂದ ಪ್ರಾರಂಭವಾಗಿರುವ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದು ಪತ್ತೆಯಾಗಿದ್ದು, ಅವರೆಲ್ಲರನ್ನೂ ಸರಕಾರಿ ಆಸ್ಪತ್ರೆಯ ಕೊರೋನಾ ವಾರ್ಡಿಗೆ ಶಿಫ್ಟ್ ಮಾಡಲಾಗಿದೆ.
ಜಿಲ್ಲೆಯ ಗರಗಂದೂರು ಗ್ರಾಮದ ಬಳಿಯಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು 25 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 25 ವಿದ್ಯಾರ್ಥಿಗಳು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮತ್ತಷ್ಟು ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಸಾಧ್ಯತೆಯಿದೆ.
ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟ ತಕ್ಷಣವೇ 2 ಆಂಬುಲೆನ್ಸ್‌ನಲ್ಲಿ ವಿದ್ಯಾರ್ಥಿಗಳನ್ನ ಕರೆತರಲಾಗಿದ್ದು, ಇನ್ನುಳಿದ ವಿದ್ಯಾರ್ಥಿಗಳ ತಪಾಸಣೆ ಮಾಡಲು ಮುಂದಾಗಲಾಗುತ್ತಿದೆ.