ಮಾಜಿ ಸಚಿವ ವಿನಯ ಕುಲಕರ್ಣಿಗೆ ಕೊರೋನಾ ಪಾಸಿಟಿವ್: ಮನೆಯಲ್ಲೇ ಚಿಕಿತ್ಸೆ
ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿಯೂ ವಿನಯ ಕುಲಕರ್ಣಿ ಅಭಿಮಾನಿಗಳು, ‘ಬೇಗನೇ ಗುಣಮುಖರಾಗಿ ಬನ್ನಿ’ ಎಂದು ಹೇಳುತ್ತಿದ್ದಾರೆ.
ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ, ಅಭಿಮಾನಿಗಳಿಗೆ ಧನ್ಯವಾದಗಳನ್ನ ತಿಳಿಸಿದ್ದು, ನಿಮ್ಮ ಹಾರೈಕೆಯಿಂದ ಕೊರೋನಾ ಗೆದ್ದು ಬರುವುದಾಗಿ ಹೇಳಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಶಾಸಕ ಪ್ರಸಾದ ಅಬ್ಬಯ್ಯ, ಕಲಘಟಗಿ ಶಾಸಕ ಸಿ.ಎಂ.ನಿಂಬಣ್ಣನವರಿಗೂ ಕೊರೋನಾ ದೃಢಪಟ್ಟಿತ್ತು. ಅವರಿಬ್ಬರು ಈಗಾಗಲೇ ಕೊರೋನಾ ಗೆದ್ದು ಬಂದಿದ್ದು, ಮಾಜಿ ಸಚಿವ ವಿನಯ ಕುಲಕರ್ಣಿ ಕೂಡಾ ಗೆದ್ದು ಬರಲಿ ಎಂದು ಎಲ್ಲರ ಹಾರೈಕೆಯಾಗಿದೆ.
                      
                      
                      
                      
                      