ಹಾಡಹಗಲೇ ಗ್ರಾಮ ಪಂಚಾಯತಿ ಸದಸ್ಯನ ಕೊಲೆ: ಬೈಕಲ್ಲಿ ಬಂದವರಿಂದ ಕೃತ್ಯ
ರಾಯಚೂರು: ರಾಜಕೀಯವಾಗಿ ಸೋಲಿಸಲಾಗದ ಸ್ಥಿತಿಯಲ್ಲಿದ್ದವರು ಗ್ರಾಮ ಪಂಚಾಯತಿ ಚುನಾವಣೆ ಮತ್ತೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹಾಡುಹಗಲೇ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ ಗೌಡೂರು-ಗುರುಗುಂಟ ಮಧ್ಯೆ ಸಂಭವಿಸಿದೆ.
ಪೈದೊಡ್ಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ಹನುಮಂತ ಎಂಬ ವ್ಯಕ್ತಿಯ ಕೊಲೆ ನಡೆದಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹರಿತವಾದ ಆಯುಧಗಳಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಹನಮಂತ ಸಾವಿಗೀಡಾಗಿದ್ದಾನೆ. ರಸ್ತೆಯ ಮಧ್ಯೆದಲ್ಲೇ ಹೊಡೆದ ಪರಿಣಾಮ ರಕ್ತದ ಮಡುವಿನಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಹಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಬೈಕ್ ಹೋಗಿರುವ ಮಾರ್ಗದ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ರಸ್ತೆಯಲ್ಲೇ ಬಿದ್ದ ಹನಮಂತನ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.