ಅತ್ಯಾಚಾರಿಗೆ ಮರಣದಂಡನೆ ವಿಧಿಸಿ- ನೊಂದ ಕುಟುಂಬಕ್ಕೆ 50ಲಕ್ಷ ನೀಡಿ: ಕರವೇ ಸಿಂಹ ಸೇನೆ
ಧಾರವಾಡ: ತಾಲೂಕಿನ ಬೋಗುರ ಗ್ರಾಮದ ಅತ್ಯಾಚಾರಿ ಆರೋಪಿಗೆ ಮರಣದಂಡನೆ ವಿಧಿಸಿ. ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸಿಂಹ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಆರೋಪಿಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಆರೋಗ್ಯ ತಪಾಸಣೆ ವೇಳೆ ವೈದ್ಯರು ಅತ್ಯಾಚಾರವಾಗಿರುವ ವಿಷಯವನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಅಂತಹ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಪೊಲೀಸರು ಕೈಗೊಳ್ಳಬೇಕು ಎಂದು ಅಗ್ರಹಿಸಿದರು.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಸಿಬಿಐಗೆ ವಹಿಸಬೇಕು. ಆಗ ಈ ಕುಟುಂಬಕ್ಕೆ ಆದ ಅನ್ಯಾಯಕ್ಕೆ ನ್ಯಾಯ ಸಿಗುವದೆಂದ ಸೇನೆಯವರು, ಒಂದು ಸರ್ಕಾರ ನಿರ್ಲಕ್ಷ್ಯ ತೋರಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.