ಬಿಜೆಪಿಗೆ ಒಂದು ವರ್ಷ: ಹುಬ್ಬಳ್ಳಿಯಲ್ಲಿ ಸಂಪಿಗೆ ಗಿಡ
ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ರಾಜ್ಯದಲ್ಲ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬದಾಮಿನಗರದಲ್ಲಿನ ಬಾಲಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸಂಪಿಗೆ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಸರಕಾರದ ಸಾಧನೆ ಜನರ ಮನಸ್ಸಿನಲ್ಲಿ ಸದಾ ಹಸಿರಾಗಬೇಕೆಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಸೆಂಟ್ರಲ್ ಅಧ್ಯಕ್ಷ ಸಂತೋಷ ಚವ್ಹಾಣ, ಮಲ್ಲಿಕಾರ್ಜುನ ಸಾವುಕಾರ, ವಿರೇಶ ಉಪ್ಪಿನ ಸೇರಿದಂತೆ ಹಲವರು ಉಪಸ್ಥಿತರಿದ್ದರು.