ಮಸ್ಕಿ ನಾಲಾ ಜಲಾಶಯ ಭರ್ತಿ: ಸಾರ್ವಜನಿಕರಿಗೆ ಎಂಜಿನಿಯರ್ ಎಚ್ಚರಿಕೆ
ರಾಯಚೂರು: ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು ಮಸ್ಕಿ ನಾಲಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ಹಳ್ಳಕ್ಕೆ ನೀರು ಬಿಡುಗಡೆ ಮಾಡಲಾಗುತ್ತಿದೆ.
ಮಸ್ಕಿ ತಾಲ್ಲೂಕಿನ ಮಾರಲದಿನ್ನಿ ಬಳಿ ಇರುವ ಮಸ್ಕಿ ಜಲಾಶಯದಿಂದ 300 ಕ್ಯೂಸೆಕ್ಸ್ ನೀರನ್ನ ಹೊರಬಿಡಲಾಗುತ್ತಿದೆ.
ಜಲಾಶಯಕ್ಕೆ ಹೆಚ್ಚಿನ ನೀರಿನ ಒಳ ಹರಿವು ಆರಂಭವಾಗಿದೆ. ಜಲಾಶಯದಿಂದ ನೀರು ಬಿಟ್ಟಿದ್ದರಿಂದ ಹಳ್ಳದಲ್ಲಿ ಇಳಿಯಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.
ಮಸ್ಕಿ ನಾಲಾ ಯೋಜನೆಯ ಪ್ರಭಾರಿ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ದಾವೂದ್ ಮನವಿ ಮಾಡಿಕೊಂಡಿದ್ದಾರೆ.