ರಾಜಧಾನಿಯಲ್ಲಿ ಪ್ರಲ್ಹಾದ ಜೋಶಿ ಸಭೆ: ಅವಳಿನಗರ ರಸ್ತೆ ಸುಧಾರಿಸಲು ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ಹುಬ್ಬಳ್ಳಿ-ಧಾರವಾಡ ರಸ್ತೆಗಳನ್ನ ಸುಧಾರಿಸುವ ಉದ್ದೇಶದಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಸರಕಾರದ ಮಂತ್ರಿಗಳೊಂದಿಗೆ ಸಭೆ ನಡೆಸಿದರು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆ ನಡೆಯಿತು. ಹುಬ್ಬಳ್ಳಿ-ಧಾರವಾಡಕ್ಕೆ ಸಂಬಂಧಿಸಿದ ರಸ್ತೆ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಸಚಿವ ಪ್ರಲ್ಹಾದ ಜೋಶಿ, ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್, ನವಲಗುಂದ ಶಾಸಕ ಶಂಕರ ಪಾಟೀಲಮುನೇನಕೊಪ್ಪ, ಎನ್ಎಚ್ಎಐ, ಪಿಡಬ್ಲ್ಯೂಡಿಯ ಅಧಿಕಾರಿಗಳು ಉಪಸ್ಥಿತರಿದ್ದರು.