Posts Slider

Karnataka Voice

Latest Kannada News

ತಹಶೀಲ್ದಾರ್ ಕಾರ್ಯಾಲಯಕ್ಕೆ ಜಿಲ್ಲಾಧಿಕಾರಿ ಭೇಟಿ : ವಾಟ್ಸಪ್ ಮೂಲಕ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ಸೂಚನೆ

1 min read
Spread the love

ಹುಬ್ಬಳ್ಳಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಇಂದು ಹುಬ್ಬಳ್ಳಿ ತಹಶೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಕೊವೀಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಮಿನಿ ವಿಧಾನ ಸೌಧಕ್ಕೆ ಆಗಮಿಸುವ ಸಾರ್ವಜನಿಕರ‌ ಸ್ಕ್ರೀನಿಂಗ್ ಕಟ್ಟುನಿಟ್ಟಾಗಿ ಮಾಡಬೇಕು. ಪ್ರತ್ಯೇಕ ವಾಟ್ಸಪ್ ಸಂಖ್ಯೆಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ, ತಕ್ಷಣವೇ ದೂರು ಹಾಗೂ ಮನವಿಗಳಿಗೆ ಸ್ಪಂದಿಸಬೇಕು. ಅನಗತ್ಯವಾಗಿ ಕಚೇರಿಗಳಿಗೆ ಸಾರ್ವಜನಿಕರು ಆಗಮಿಸುವುದು ತಪ್ಪುವಂತೆ ನೋಡಿಕೊಳ್ಳಬೇಕು. ಕೊವೀಡ್ ಪ್ರಕರಣಗಳನ್ನು ನಿಯಂತ್ರಿಸುವ ಕುರಿತು ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಧಿಕಾರಿ ಮಹಮದ್ ಜುಬೇರ್, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ್ ಪ್ರಕಾಶ್ ನಾಸಿ ಸೇರಿದಂತೆ ಇತರೆ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ 5000 ಪರಿಹಾರ ಧನ : ಅರ್ಜಿ ಸಲ್ಲಿಸಲು ಜುಲೈ 31 ಕಡೆಯ ದಿನ

ಕೊವೀಡ್-19 ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ 5000 ರೂಪಾಯಿ ಪರಿಹಾರ ಧನವನ್ನು ಸರ್ಕಾರ ಘೋಷಿಸಿದೆ.‌ ಪರಿಹಾರ ಧನಕ್ಕಾಗಿ ಅರ್ಜಿ ಸಲ್ಲಿಸವ ದಿನಾಂಕವನ್ನು ಜುಲೈ 31 ವಿಸ್ತರಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಚಾಲಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಲ್ವತ್ವಾಡಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *