ಸರಕಾರ ಇಂಗು ತಿಂದ ಮಂಗನಂತಾಗಿದೆ: ಕುಮಾರಸ್ವಾಮಿ ಟೀಕೆ

ಬೆಂಗಳೂರು: ರಾಜ್ಯ ಸರಕಾರ ಕೊರೋನಾ ವಿಷಯವಾಗಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದು, ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಹೀಗಿವೆ ನೋಡಿ:-
ಕೊರೋನಾ ಸೋಂಕು ಪೀಡಿತರು ಬೆಡ್ ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು. 1/4
ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ನೆರೆಯ ಕೇರಳ ಸರ್ಕಾರ ಕೊರೋನ ತಡೆಗೆ ಕೈಗೊಂಡ ಕ್ರಮಗಳ ‘ಸಿದ್ದ’ ಮಾದರಿ ಕಣ್ಣೆದುರಿಗಿದೆ. ಆದರೆ, ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ. 2/4
ಕೊರೋನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ. 3/4
ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೊರೋನಾ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ. 4/4