ಸಿಎಂ ನಿವಾಸದ ಮುಂದೆ ದೇವೇಗೌಡರ ಹೋರಾಟ: ಹಿಂದಕ್ಕೆ ಪಡೆದ ಮಾಜಿ ಪ್ರಧಾನಿ
ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸಬೇಕೆಂದು ಆಗ್ರಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೋಮವಾರ ಸಿಎಂ ಯಡಿಯೂರಪ್ಪ ನಿವಾಸದ ಮುಂದೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದೀಗ ಈ ಹೋರಾಟವನ್ನ ಹಿಂದೆ ಪಡೆದಿರುವುದಾಗಿ ಮಾಜಿ ಪ್ರಧಾನಿಗಳು ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲಿ ಬರೆದುಕೊಂಡಿದ್ದು:-
ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರು,ಮಂಡ್ಯ ಜಿಲ್ಲೆಯ ರಾಜಕೀಯ ವಿದ್ಯಮಾನಗಳ ಕುರಿತ ನಮ್ಮ ಬೇಡಿಕೆಗಳನ್ನು ಭಾಗಶಃ ಒಪ್ಪಿರುತ್ತಾರೆ. ಆದ್ದರಿಂದ ಜೂನ್ 29ರಂದು ಮುಖ್ಯಮಂತ್ರಿಗಳ ನಿವಾಸದ ಮುಂದೆ ನಡೆಯಬೇಕಾಗಿದ್ದ ಧರಣಿಯನ್ನು ಹಿಂಪಡೆಯಲಾಗಿದೆ.@CMofKarnataka @BSYBJP @drashwathcn @RAshokaBJP