ಲಾಕ್ ಡೌನ್ ಮಾಡೋದಿಲ್ಲ: ಆರ್ಥಿಕ ಸುಧಾರಣೆ ಮಾಡಬೇಕಿದೆ- ಸಿಎಂ ಯಡಿಯೂರಪ್ಪ ಖಡಕ್ ಹೇಳಿಕೆ

ಬೆಂಗಳೂರು: ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ವಪಕ್ಷ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡುತ್ತೇವೆ. ಅವರ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರಮ ಕೈಗೊಳ್ಳಬೇಕು. ಲಾಕ್ ಡೌನ್ ಪ್ರಶ್ನೆಯೇ ಇಲ್ಲ. ಬೆಂಗಳೂರು ಲಾಕ್ ಡೌನ್ ಪ್ರಸ್ತಾಪ ಇಲ್ಲವೇ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಆರ್ಥಿಕ ಸುಧಾರಣೆಯೇ ಮುಖ್ಯ. ವಿಪಕ್ಷಗಳ ಸಲಹೆಯನ್ನ ಗಂಭೀರವಾಗಿ ಪರಿಗಣಿಸಿ ಮುಂದುವರಿಯುತ್ತೇವೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಪ್ರಶ್ನೆ ಇಲ್ಲ ಎಂದು ಖಡಕ್ಕಾಗಿ ಹೇಳಿದರು.