ಯೋಗ ಭಾರತೀಯ ಸಂಸ್ಕೃತಿಯ ಭಾಗ: ಯೋಧರ ಸ್ಮರಿಸಿದ ಯೋಗಾ ಡೇ

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಯೋಗ ದಿನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.
ನಳೀನ್ ಕುಮಾರ್ ಕಟೀಲ್, ಎಂಎಲ್ಸಿ ರವಿಕುಮಾರ್, ಬಿಜೆಪಿ ಪದಾಧಿಕಾರಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಯೋಗ ಮಾಡಿದರು. ಕೊರೋನಾ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಸರಳವಾಗಿ ಯೋಗ ದಿನ ಆಚರಣೆಯನ್ನ ನಡೆಸಲಾಯಿತು. ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಭಾಗಿಯಾಗಿದ್ದರು.
ಯೋಗ ದಿನಕ್ಕೂ ಮುನ್ನ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿ ಮೌನಾಚರಣೆ ಮಾಡಲಾಯಿತು.
ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಮಾತಾಡಿ ಹೇಳಿದ್ದೀಷ್ಟು: ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ಜಗತ್ತಿಗೆ ಮಹತ್ತರ ಕೊಡುಗೆಯನ್ನು ದೇಶ ಕೊಟ್ಟಿದೆ. ವಿಜ್ಞಾನ, ಗಣಿತದಿಂದ ಹಿಡಿದು ಹಲವು ಕೊಡುಗೆಯಲ್ಲಿ ಯೋಗವೂ ಒಂದು. ಯೋಗ ಆಧ್ಯಾತ್ಮದ ಒಂದು ಭಾಗ, ಭಾರತೀಯ ಸಂಸ್ಕೃತಿ ಕಣ್ಣು ಮುಚ್ಚಿ ಭಗವಂತನನ್ನು ಕಂಡಿದ್ದು ಯೋಗದ ಮೂಲಕ. ಕಣ್ಣು ಮುಚ್ಚಿ ಭಗವಂತನ ಧ್ಯಾನ ಉಳಿದವು ಕಣ್ಣು ಬಿಟ್ಟು ಭಗವಂತನ ಕಾಣುವ ಪ್ರಯತ್ನ. ಮನಸ್ಸು ಬುದ್ದಿಯ ಮೂಲಕ ಭಗವಂತ, ಮೋಕ್ಷವನ್ನು ಕಾಣುವ ಪದ್ದತಿ ಯೋಗ. ಸಮಾಜದ ಸ್ವಾಸ್ಥ್ಯ ಕಾಪಾಡಲು ಯೋಗ ಮಹತ್ವದ ಕೊಡುಗೆ. ಕೇವಲ ನಮ್ಮ ದೇಶದಲ್ಲಿ ಉಳಿಸದೇ ಜಗತ್ತಿಗೆ ಯೋಗವನ್ನು ಪರಿಚಯಿಸಿದೆ. ಸಾವಿರಾರು ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಯೋಗ ಇಂದು ವಿಶ್ವ ಯೋಗ ದಿನವಾಗಿ ಆಚರಣೆಯಾಗುತ್ತಿದೆ. ಆರನೇ ವರ್ಷದ ಯೋಗ ದಿನಾಚರಣೆ ಮಾಡಲಾಗುತ್ತಿದೆ ಎಂದರು.