Posts Slider

Karnataka Voice

Latest Kannada News

ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು: ಪೊಲೀಸರ ವಿರುದ್ಧ ವಕೀಲರ ಆಕ್ರೋಶ

1 min read
Spread the love

ಹುಬ್ಬಳ್ಳಿ: ಪಾಕ್​ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ​ ವಿದ್ಯಾರ್ಥಿಗಳಿಗೆ ಜಾಮೀನು‌‌ ಮಂಜೂರಾಗಿದೆ. ಹುಬ್ಬಳ್ಳಿಯ ಜೆಎಂಎಫ್​ಸಿ 2ನೇ ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಜ್​​​​​​​ಶೀಟ್ ಸಲ್ಲಿಸದೇ ಇರುವುದರಿಂದ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 90 ದಿನದಲ್ಲಿ ಚಾರ್ಜ್​​​​ಶೀಟ್ ದಾಖಲಿಸಬೇಕಾಗಿತ್ತು. ಆದ್ರೆ ಗ್ರಾಮೀಣ ಪೊಲೀಸರು 109 ದಿನಗಳ ನಂತರ ಚಾರ್ಜ್​​​​​ಶೀಟ್ ಸಲ್ಲಿಸಿದ್ದರು. ಹೀಗಾಗಿ ಆರೋಪಿಗಳು ಜಾಮೀನು ಮೇಲೆ ಹೊರ ಬರುವಂತಾಯಿತು ಎಂದು ದೂರಿದ್ದಾರೆ

ಪ್ರಕರಣದಲ್ಲಿ ಎಫ್​ಐಆರ್ ದಾಖಲಿಸುವುದರಿಂದ ಹಿಡಿದು ಚಾರ್ಜ್ ಶೀಟ್ ಸಲ್ಲಿಸುವವರಿಗೂ ಪೊಲೀಸರ ವೈಫಲ್ಯ ಹಾಗೂ ನಿರ್ಲಕ್ಷ್ಯ ಕಾಣಿಸಿದ್ದು, ಉದ್ದೇಶ ಪೂರ್ವಕವಾಗಿ ಒಂದು ಕಡೆ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಯುತ್ತಿದೆ. ಗೃಹ ಸಚಿವರು ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತ್ತು ಮಾಡಬೇಕು ಎಂದು ಯುವ ವಕೀಲರ ಸಂಘ ಒತ್ತಾಯಿಸಿದೆ.‌


Spread the love

Leave a Reply

Your email address will not be published. Required fields are marked *