ಶಾಲೆಗಳನ್ನ ಇನ್ನೆರಡು ತಿಂಗಳು ಆರಂಭಿಸುವುದು ಬೇಡ: ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್
ಬದಾಮಿ: ಕೊರೋನಾ ವೈರಸ್ ಪ್ರಭಾವ ಹೆಚ್ಚಿರುವುವಾಗಲೇ ಶಾಲೆಗಳನ್ನ ಆರಂಭಿಸುವ ಬಗ್ಗೆ ಶಿಕ್ಷಣ ಸಚಿವರು ಮಾತನಾಡುತ್ತಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಇನ್ನೆರಡು ತಿಂಗಳು ಶಾಲೆಗಳನ್ನ ಆರಂಭಿಸದೇ ಇರುವುದು ಸೂಕ್ತ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೇರೆ ದೇಶದಗಳಲ್ಲಿ ಶಾಲೆಗಳನ್ನ ಆರಂಭಿಸಿದ ನಂತರ ಕೊರೋನಾ ಪ್ರಮಾಣ ಹೆಚ್ಚಾಗಿದೆ. ಶಾಲೆ ಆರಂಭಿಸುವ ಬಗ್ಗೆ ಚಿಂತನೆ ನಡೆದ ಬೆನ್ನಲ್ಲೇ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಸರಿಯಾದ ನಿರ್ಧಾರ ಮಾಡಬೇಕೆಂದು ಸಿದ್ಧರಾಮಯ್ಯ ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.