ಹಿಡಿದ ಹಠ ಸಾಧಿಸಿದ ಬೆಳಗಾವಿ ಸಾಹುಕಾರ: ಕೊನೆಗೂ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆ ಉಸ್ತುವಾರಿ
ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವರಾಗಿ ರಮೇಶ್ ಜಾರಕಿಹೊಳಿ, ಸಚಿವ ಕೆ. ಗೋಪಾಲಯ್ಯಗೆ ಹಾಸನ ಜಿಲ್ಲಾ ಉಸ್ತುವಾರಿ ಹೊಣೆಯನ್ನ ಸರಕಾರ ನೀಡಿ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಪಡೆಯುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಈ ಮೊದಲು ಜಗದೀಶ್ ಶೆಟ್ಟರ್ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು. ಲಕ್ಷ್ಮಣ ಸವದಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಜಿಲ್ಲಾ ಉಸ್ತುವಾರಿಗಾಗಿ ಪೈಪೋಟಿ ನಡೆದಿತ್ತು. ಇದೀಗ ರಮೇಶ್ ಜಾರಕಿಹೊಳಿ ಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸ್ಥಾನ. ಉಮೇಶ್ ಕತ್ತಿ ಕೂಡಾ ಬೆಳಗಾವಿ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ರು. ಸಚಿವ ಸ್ಥಾನ ಪಡೆದು ಬೆಳಗಾವಿ ಜಿಲ್ಲಾ ಉಸ್ತುವಾರಿ ಕನಸು ಕಂಡಿದ್ದ ಉಮೇಶ್ ಕತ್ತಿ.
ಅಂತಿಮವಾಗಿ ಅಂದುಕೊಂಡಂತೆ ಮೊದಲು ಜಲ ಸಂಪನ್ಮೂಲ ಖಾತೆ, ಇದೀಗ ಬೆಳಗಾವಿ ಉಸ್ತುವಾರಿ ಪಡೆಯುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದು, ಹಿಡಿದ ಹಠವನ್ನ ಪಡೆಯುವಲ್ಲಿ ಜಯಗಳಿಸಿದ್ದಾರೆ.