ಹೊಸ ಪಲ್ಸರ್ ಚಲಾಯಿಸುತ್ತಿದ್ದ ಬೈಕ್ ಸವಾರ ಸಾವು

ಚಾಮರಾಜನಗರ: ಬೈಕ್ ಗೆ- ಲಾರಿ ಡಿಕ್ಕಿ ಹೊಡೆದ ಪರಿಣಾಮದಿಂದ ದ್ವಿಚಕ್ರ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಡೀವಿಯೇಷನ್ ರಸ್ತೆಯಲ್ಲಿ ಸಂಭವಿಸಿದೆ.
ಪವನ್ ಕುಮಾರ್ ಮೃತ ದುರ್ದೈವಿಯಾಗಿದ್ದು, ಕಳೆದ 4 ದಿನಗಳ ಹಿಂದಷ್ಟೇ ಖರೀದಿಸಿದ್ದ ಪಲ್ಸರ್ ಬೈಕ್ ಚಲಾಯಿಸುತ್ತಿದ್ದ, ಹೊಸ ಬೈಕ್ ನಿಯಂತ್ರಣಕ್ಕೆ ಬಾರದೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳಕ್ಕೆ ಸಂಚಾರಿ ಪೋಲಿಸರು ಭೇಟಿ ನೀಡಿ ಮೃತ ದೇಹ ರವಾನೆ ಮಾಡಲಾಗಿದೆ.