ರಾಕ್ಷಸರಿಗೆ ಕೊರೋನಾ ಬರೋದಿಲ್ಲ: ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ
1 min readಶಿವಮೊಗ್ಗ: ಕೋವಿಡ್-19 ಎದುರಿಸಲು ಆತ್ಮಸ್ಥೈರ್ಯ ಇರಬೇಕು. ರಾಕ್ಷಸರಿಗೆ ಕೊರೋನಾ ವೈರಸ್ ಬರುವುದಿಲ್ಲ. ನನ್ನಂತವನಿಗಂತೂ ಬರುವುದೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೋವಿಡ್ -19 ಭಯದಿಂದ ಶಾಸಕರು, ಸಚಿವರು, ಸಂಸದರು ಮನೆಯಲ್ಲೇ ಇದ್ದರೆ ಅಭಿವೃದ್ಧಿ ಕಾಮಗಾರಿಗಳು ನಡೆಯುವುದು ಹೇಗೆ..? ಇಡೀ ಪ್ರಪಂಚ ನರೇಂದ್ರ ಮೋದಿ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದು, ಜನ ಲಕ್ಷಾಂತರ ರೂಪಾಯಿ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಕೋವಿಡ್- 19 ಬಗ್ಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಂದಾಗಿ ಹೋರಾಟ ಮಾಡುತ್ತಿದ್ದೇವೆ. ಸೋನಿಯಾ ಗಾಂಧಿಯ ಹೇಳಿಕೆಯಿಂದ ಎಲ್ಲರಿಗೂ ನೋವಾಗಿದೆ. ಸೋನಿಯಾ ಗಾಂಧಿ ತಮ್ಮ ಹೇಳಿಕೆ ವಾಪಸ್ ಪಡೆಯಲಿ ಎಂದು ನಾನು ಹೇಳುವುದಿಲ್ಲ. ಸಾಗರ ಒಬ್ಬ ವಕೀಲ ತನ್ನ ಕೆಲಸವನ್ನು ತಾನು ಮಾಡಿದ್ದಾನೆ. ಸಬ್ ಇನ್ಸ್’ಪೆಕ್ಟರ್ ಎಫ್’ಐಆರ್ ಹಾಕಿರುವುದು ಸರಿಯೋ ತಪ್ಪೋ ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.