ಶಾಲಾ-ಕಾಲೇಜು ಪುನರಾರಂಭ: ಶಿಕ್ಷಣ ಇಲಾಖೆ ಜೊತೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಬೆಂಗಳೂರು: ಮುಖ್ಯಮಂತ್ರಿಗಳು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪರಿಶೀಲನಾ ಸಭೆ ನಡೆಸಿದರು. ಲಾಕ್ ಡೌನ್ ನಿಂದ ಶಾಲಾ ಕಾಲೇಜುಗಳು ಕ್ಲೋಸ್ ಹಿನ್ನೆಲೆಯಲ್ಲಿ ಈ ಸಭೆ ಮಹತ್ವದ್ದಾಗಿದೆ.
ಪ್ರಾಥಮಿಕ ಹಾಗೂ ಫ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಚರ್ಚೆ ನಡೆಸಿದರು. ಮುಖ್ಯವಾಗಿ ಲಾಕ್ ಡೌನ್ ನಂತರ ಇಲಾಖೆ ಮಾಡಿದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ, ಲಾಕ್ ಡೌನ್ ನಿಂದ ಕ್ಲೋಸ್ ಆಗಿರುವ ಶಾಲಾ ಕಾಲೇಜು ಆರಂಭಿಸುವ ಕುರಿತು ಮಾತುಕತೆ ನಡೆಸಿದರು.
ಈಗಾಗಲೇ ಕೆಲ ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಿಸಲು ಆದೇಶ ಮಾಡಲಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಯಾವಾಗ ಶಾಲಾ ಕಾಲೇಜು ಓಪನ್ ಮಾಡಬೇಕು ಹಾಗೂ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಇಂಗ್ಲಿಷ್ ಪತ್ರಿಕೆಗೆ ಮಾಡಿಕೊಂಡ ಸಿದ್ದತೆ ಕುರಿತು ಮಾಹಿತಿ ಕಲೆ ಹಾಕಿದರು.