ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಮೊದಲ ಹೋರಾಟ

ಬೆಂಗಳೂರು: ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಪಂಚಾಯತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯಿದೆಗೆ ತಿದ್ದುಪಡಿ ಸೇರಿದಂತೆ ಸರ್ಕಾರದ ವಿವಿಧ ಕ್ರಮಗಳನ್ನು ಖಂಡಿಸಿ ವಿಧಾನಸೌಧದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಕಾಂಗ್ರೆಸ್ ಸಿಎಲ್ ಪಿ ಸಭೆಯಲ್ಲಿ ನಾಯಕರ ಒಮ್ಮತದ ಅಭಿಪ್ರಾಯದ ಮೇರೆಗೆ ಸಾಂಕೇತಿಕವಾಗಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಪ್ರಮುಖರು, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಕೆ ಜೆ ಜಾರ್ಜ್, ಎಸ್ ಆರ್ ಪಾಟೀಲ್, ಹೆಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಪುಷ್ಪ ಅಮರನಾಥ್, ಹೆಚ್. ಆಂಜನೇಯ ಸೇರಿದಂತೆ ಬಹುತೇಕರು ಭಾಗವಹಿಸಿದ್ದರು.