ಕೊರೋನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿ: ಚಿಕಿತ್ಸೆ ನೀಡಿದ ವೈಧ್ಯರು ಆಸ್ಪತ್ರೆಗೆ ದಾಖಲು

ಕಲಬುರಗಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65ವಯಸ್ಸಿನ ವೃದ್ಧರೋರ್ವರು ಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದ್ದು, ಇವರಿಗೆ ಚಿಕಿತ್ಸೆ ನೀಡಿದ ವೈಧ್ಯರು ಸೇರಿದಂತೆ ಐವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದೇಶದಲ್ಲೇ ಮೊದಲ ಬಲಿಯಾಗಿದ್ದ ಕಲಬುರಗಿ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿರುವ ಘಟನೆ ಇದಾಗಿದ್ದು, ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕಲಬುರಗಿಯ ಸಂತ್ರಸವಾಡಿಯ ವ್ಯಕ್ತಿ ಎರಡು ದಿನದ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಖಾಸಗಿ ಆಸ್ಪತ್ರೆಗೆ ಬೀಗ ಜಡಿಯಲಾಗಿದ್ದು, ಚಿಕಿತ್ಸೆ ನೀಡಿದವರನ್ನ ಬೇರೊಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.