ಕೊರೋನಾ ವೈರಸ್: ಹುಬ್ಬಳ್ಳಿಯ ಕಿಮ್ಸ್ ಹೈ ಅಲರ್ಟ್

ಹುಬ್ಬಳ್ಳಿ: ಕೊರೋನಾ ವೈರಸ್ ಭಾರತಕ್ಕೂ ಬಂದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಬಹುದೊಡ್ಡ ಆಸ್ಪತ್ರೆಯಾದ ಕಿಮ್ಸ್ ನಲ್ಲಿ ಹೈ ಅಲರ್ಟ್ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಲು ಮುಂದಾಗಿದೆ ಆಡಳಿತ ವರ್ಗ.
ಯಾವುದೇ ರೋಗಿಗಳಿಗೆ ಚಿಕಿತ್ಸೆ ನೀಡುವವರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾರ್ಯನಿರ್ವಹಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂಜಾಗ್ರತಾ ಕ್ರಮವಾಗಿ ಜನರಿಗೂ ಮಾಸ್ಕಗಳನ್ನ ವಿತರಣೆ ಮಾಡಲಾಗುತ್ತಿದೆ.