ಗೃಹಮಂತ್ರಿ ಅಮಿತ್ ಶಾ ವಜಾಗೆ ಆಗ್ರಹ: ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

ನವದೆಹಲಿ: ದೆಹಲಿ ಹಿಂಸಾಚಾರವನ್ನ ನಿಯಂತ್ರಿಸಲು ವಿಫಲರಾದ ಕೇಂದ್ರ ಗೃಹ ಸಚಿವ ಅಮಿತ ಶಾ ಅವರನ್ನ ಕೂಡಲೇ ವಜಾಗೊಳಿಸಿ. ಅಷ್ಟೇ ಅಲ್ಲ, ರಾಜಧರ್ಮ ಪಾಲಿಸುವಂತೆ ಕೇಂದ್ರ ಸರಕಾರಕ್ಕೆ ತಾಕೀತು ಮಾಡಬೇಕೆಂದು ಕಾಂಗ್ರೆಸ್ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದರಿಗೆ ಮನವಿ ಮಾಡಿದೆ.
ನಾಗರಿಕರ ಪ್ರಾಣ, ಆಸ್ತಿ ಮತ್ತು ಸ್ವಾತಂತ್ರತ್ಯವನ್ನ ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಸಂವಿಧಾನಬದ್ಧ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ನಿರ್ದೇಶನ ನೀಡಬೇಕೆಂದು ನಿಯೋಗ ಕೇಳಿಕೊಂಡಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನಸಿಂಗ್, ಮಲ್ಲಿಕಾರ್ಜುನ ಖರ್ಗೆ, ಗುಲಾಂನಬಿ ಆಜಾದ, ಪಿ.ಚಿದಬರಂ, ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.