ವಿನಯ ಕುಲಕರ್ಣಿ ಜಾಮೀನು ಅರ್ಜಿಗೆ ಸಿಬಿಐ ತಕರಾರು ಸಲ್ಲಿಕೆ…!

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿಗೆ ಸಿಬಿಐ ತಕರಾರು ಅರ್ಜಿಯನ್ನ ಸಲ್ಲಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಗೆ ಸಂಬಂಧಿಸಿದ ಹಾಗೇ, ವಾದ-ಪ್ರತಿವಾದಕ್ಕೆ ಅವಕಾಶವನ್ನ ನೀಡಿ ಮಾರ್ಚ 6ಕ್ಕೆ ಮುಂದೂಡಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಪರವಾದ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿ ಕೆಲವು ದಾಖಲೆಗಳನ್ನ ಸಲ್ಲಿಸಿದ್ದು, ಎರಡು ಕಡೆಯ ವಾದ-ಪ್ರತಿವಾದ ನಾಳೆ ನಡೆಯಲಿದ್ದು, ಈ ಕುರಿತು ಸಾಕಷ್ಟು ಕುತೂಹಲ ಮೂಡಿಸಿದೆ.
ಮಾಜಿ ಸಚಿವ ವಿನಯ ಕುಲಕರ್ಣಿಯವರ ಬಂಧನವಾಗಿ ಇಂದಿಗೆ ಬರೋಬ್ಬರಿ ನಾಲ್ಕು ತಿಂಗಳು ಕಳೆದಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿನಯ ಕುಲಕರ್ಣಿಯವರು ಇರುವುದನ್ನ ಇಲ್ಲಿ ಸ್ಮರಿಸಬಹುದು.